ಮೊಬೈಲ್‌ನಲ್ಲೇ ರೇಷನ್ ಕಾರ್ಡ್ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಹೇಗೆ?
ಪಡಿತರ ಚೀಟಿ ಅಂದ್ರೆ Ration Card ಅನ್ನು ಅನೇಕ ಸರ್ಕಾರಿ ಯೋಜನೆಗಳನ್ನು ತೆಗೆದುಕೊಳ್ಳಲು ಸಹ ಬಳಸಲಾಗುತ್ತದೆ.
ಪಡಿತರ ಚೀಟಿಯಲ್ಲಿ ಕುಟುಂಬದ ಸದಸ್ಯರ ಹೆಸರು ಸೇರಿಸುವುದು ಅತಿ ಮುಖ್ಯವಾಗಿರೊದ್ರಿಂದ ಈ ಕೆಲಸ ಮಾಡಲೇಬೇಕಾದ ಅನಿವಾರ್ಯತೆ ಕೂಡ ಇರುತ್ತದೆ.
ಮಗುವಿನ ಜನನ ಪ್ರಮಾಣಪತ್ರವನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳಬೇಕು ಎಂಬುದನ್ನು ನೆನಪಿನಲ್ಲಿಡಿ
ನಿಮ್ಮ ರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡಿಸಬೇಕಾದ ಸಂದರ್ಭ ಬಂದಿದೆಯಾ ಅಥವಾ ಹೆಸರು ತಿದ್ದುಪಡಿ ಮಾಡಬೇಕಾಗಿದೆಯಾ?. ಚಿಂತಿಸಸಬೇಡಿ. ನೀವು ಇದೀಗ ನಿಮ್ಮ ಸ್ಮಾರ್ಟ್‌ಫೋನ್ ಅಥವಾ ಕಂಪ್ಯೂಟರ್ ಮೂಲಕವೇ ಈ ಎರಡೂ ಕಾರ್ಯಗಳನ್ನು ಸುಲಭವಾಗಿ ನೆರವೇರಿಸಬಹುದಾಗಿದೆ. ಯಾವುದೇ ಕಚೇರಿಗಳಿಗೆ ಅಲೆದಾಡದೇ ಆನ್‌ಲೈನ್ ಸಹಾಯದಿಂದ ನಿಮ್ಮ ಮನೆಯಲ್ಲೇ ಕುಳಿತು ರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಬಹುದು ಹಾಗೂ ಹೆಸರು ತಿದ್ದುಪಡಿ ಮಾಡಬಹುದು.
ಮನೆ ಸೊಸೆಯ ಹೆಸರನ್ನು ಪಡಿತರ ಚೀಟಿಯಲ್ಲಿ ನೋಂದಣಿ:
ಮದುವೆಯ ನಂತರ ಹೊಸ ಸೊಸೆ ಮನೆಗೆ ಬಂದರೆ ಪಡಿತರ ಚೀಟಿಯಲ್ಲಿ (Ration Card) ಆಕೆಯ ಹೆಸರನ್ನು ಸೇರಿಸಲು ಮೊದಲನೆಯದಾಗಿ ಆಧಾರ್ ಕಾರ್ಡ್ ಅನ್ನು ಬದಲಾಯಿಸಬೇಕಾಗುತ್ತದೆ. ಇದಕ್ಕಾಗಿ ಮೊದಲು ಹುಡುಗಿ ತನ್ನ ಆಧಾರ್‌ನಲ್ಲಿ ತಂದೆಯ ಬದಲು ಗಂಡನ ಹೆಸರನ್ನು ನಮೂದಿಸಬೇಕಾಗುತ್ತದೆ ಮತ್ತು ವಿಳಾಸವನ್ನು ನವೀಕರಿಸಬೇಕು. ಅದರ ನಂತರ ಪರಿಷ್ಕೃತ ಆಧಾರ್ ಕಾರ್ಡ್‌ನ ಪ್ರತಿ ಜೊತೆಗೆ ಆಹಾರ ಸರಬರಾಜು ಅಧಿಕಾರಿಗೆ ಅರ್ಜಿಯನ್ನು ನೀಡಬೇಕಾಗುತ್ತದೆ.
ಮಗುವಿನ ಹೆಸರನ್ನು ಪಡಿತರ ಚೀಟಿಯಲ್ಲಿ ನೋಂದಣಿ:
ಕುಟುಂಬದಲ್ಲಿ ಒಂದು ಮಗು ಜನಿಸಿದರೆ ಆ ಮಗುವಿನ ಹೆಸರನ್ನು ಪಡಿತರ ಚೀಟಿಯಲ್ಲಿ ನೋಂದಾಯಿಸಿಕೊಳ್ಳಬೇಕಾದರೆ ಮೊದಲು ಮಗುವಿನ ಆಧಾರ್ ಕಾರ್ಡ್ (Aadhaar Card) ಅನ್ನು ಮಾಡಬೇಕಾಗುತ್ತದೆ. ಇದಕ್ಕಾಗಿ ಮಗುವಿನ ಜನನ ಪ್ರಮಾಣಪತ್ರದ ಅಗತ್ಯವಿದೆ. ಆದ್ದರಿಂದ ಮಗುವಿನ ಜನನ ಪ್ರಮಾಣಪತ್ರವನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳಬೇಕು ಎಂಬುದನ್ನು ನೆನಪಿನಲ್ಲಿಡಿ ಇಲ್ಲದಿದ್ದರೆ ಅದಕ್ಕೆ ಸಂಬಂಧಿಸಿದ ಬಹಳಷ್ಟು ಕೆಲಸಗಳು ಸ್ಥಗಿತಗೊಳ್ಳಬಹುದು.
ಈ ಎರಡೂ ಕಾರ್ಯಗಳು ಅತ್ಯಗತ್ಯವಾಗಿರುವುದರಿಂದ, ನಾವಿಂದು ರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡಿಸುವುದು ಹಾಗೂ ಹೆಸರನ್ನು ತಿದ್ದುಪಡಿ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತೇವೆ. ಇದಕ್ಕಾಗಿ, ನೀವು ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅನ್ನು ಹೊಂದಿರಬೇಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
ಈ ಎರಡು ದಾಖಲೆಗಳು ಇದ್ದರೆ ನೀವು ಆನ್‌ಲೈನ್ ಮುಖಾಂತರ ರೇಷನ್ ಕಾರ್ಡ್‌ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು.
ಪಡಿತರ ಚೀಟಿಯಲ್ಲಿ ಆನ್‌ಲೈನ್‌ನಲ್ಲಿ ಹೆಸರನ್ನು ಸೇರಿಸಿ
1: ಅಧಿಕೃತ ವೆಬ್ ಸೈಟ್ ಗೆ ಲಾಗ್ ಇನ್ ಆಗುವುದು https://ahara.kar.nic.in Click here
2: ಲಾಗ್‌ಇನ್ ಮಾಡಿದ ನಂತರ ಪುಟದಲ್ಲಿ ಇ-ಸೇವೆಯ ಆಯ್ಕೆಯಲ್ಲಿ ಇ-ಸ್ಥಿತಿಯಡಿ ತಿದ್ದುಪಡಿ ವಿನಂತಿಯನ್ನು ಕ್ಲಿಕ್ ಮಾಡಿ
3: ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಫಾರ್ಮ್‌ನಲ್ಲಿ ಎಲ್ಲ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿಕೊಳ್ಳಿ.
4: ಆ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡುವುದು.
5: ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಲ್ಲಿಸಬೇಕಾಗುತ್ತದೆ.
6: ಫಾರ್ಮ್ ಅನ್ನು ಸಲ್ಲಿಸಿದ ನಂತರ ನೋಂದಣಿ ಸಂಖ್ಯೆ ಸಿಗುತ್ತದೆ.
7: ನೋಂದಣಿ ಸಂಖ್ಯೆ ಮೂಲಕ ವೆಬ್ ಸೈಟ್ ಗೆ ಲಾಗ್‌ಇನ್ ಆಗಬಹುದು ಹಾಗೂ ಫಾರ್ಮ್ ಅನ್ನು ಟ್ರ್ಯಾಕ್ ಮಾಡಬಹುದು.
8: ನೀಡಲಾದ ಎಲ್ಲ ದಾಖಲಾತಿ ಸರಿಯಾಗಿದ್ದರೆ ಅಂಚೆ ಮೂಲಕ ಮನೆಗೆ ಪಡಿತರ ಚೀಟಿಯನ್ನೂ ಕಳಿಸಲಾಗುತ್ತದೆ.




No comments:
Post a Comment